ಚಾಮರಾಜನಗರ : ಇಂದು ಬೆಳಿಗ್ಗೆ ಬೆಂಗಳೂರಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಚಾಮರಾಜನಗರದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಗರ್ಭಿಣಿ ದುರ್ಮರಣ ಹೊಂದಿದ್ದಾಳೆ.
ಹೌದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಗರ್ಭಿಣಿ ನಮಿತ (22) ಸಾವನ್ನಪ್ಪಿದ್ದಾಳೆ. ಹೋಲಿ ಕ್ರಾಸ್ ಬಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುವಾಗ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಕೆಎಸ್ಆರ್ಟಿಸಿ ಬಸ್ ಬಿಟ್ಟು ಚಾಲಕ ಪರಾಗಿದ್ದಾನೆ. ಈ ವೇಳೆ ಮೃತಳ ಕುಟುಂಬಸ್ಥರು, ಸ್ಥಳೀಯರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಪೊಲೀಸರು ಹೈರಾಣಾಗಿದ್ದಾರೆ. ಕೊಳ್ಳೇಗಾಲ ಗ್ರಾಮದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.