ಮೈಸೂರು : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಪಶ್ಚಿಮ ಘಟ್ಟಗಳಲ್ಲಿ ಗುಡ್ಡಕುಸಿದು ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮಳೆಗೆ ಮನೆಗೋಡೆ ಬಾಣಂತಿ ಸಾವನ್ನಪ್ಪಿದ್ದಾಳೆ.
ಘಟನೆಯು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.