ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ದಿನೇ ದಿನೇ ಬಾಣಂತಿಯರ ಸಾವುಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಹೊಸಪೇಟೆ ಮೂಲದ ಮುಸ್ಕಾನ್ (22) ಎನ್ನುವ ಬಾಣಂತಿಯ ಸಾವಾಗಿದೆ. ಹಾಗಾಗಿ ಇದೀಗ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ನಿನ್ನೆ ರಾತ್ರಿ ಬಾಣಂತಿ ಮುಸ್ಕಾನ್ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನವೆಂಬರ್ 10 ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡಿದ್ದರು. ಸಿಸೇರಿಯನ್ ಬಳಿಕ ಮುಸ್ಕಾನ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನವಂಬರ್ 11 ರಂದು ಬಾಣಂತಿ ಮುಸ್ಕಾನ್ ಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಿಮ್ಸ್ ಆಸ್ಪತ್ರೆಯಲ್ಲಿ ಇದ್ದು ಮುಸ್ಕಾನ್ ಒಂದು ದಿನ ಚಿಕಿತ್ಸೆ ಪಡೆದಿದ್ದಾರೆ. ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಗಾಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಮುಸ್ಕಾನ್ ನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರಿಸಿದ್ದಾರೆ. 15 ದಿನ ನಿರಂತರ ಚಿಕಿತ್ಸೆ ಪಡೆದರೂ ಖಾಸಗಿ ಆಸ್ಪತ್ರೆಯಲ್ಲಿ ಮುಸ್ಕಾನ್ ಸಾವನ್ನಪ್ಪಿದ್ದಾಳೆ.