ಬೆಂಗಳೂರು, ಕರ್ನಾಟಕ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ ಬೆಂಗಳೂರಿನ ಬಳ್ಳಾರಿ ರಸ್ತೆ ಸಜ್ಜುಗೊಂಡಿದೆ.
ಪ್ರಧಾನಿ ಮೋದಿ ಆರ್ವಿ ರಸ್ತೆ (ರಾಗಿಗುಡ್ಡ) ದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣವನ್ನು ಕೈಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಇಂದು ಬೆಳಿಗ್ಗೆ 10:55 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು -ಬೆಳಗಾವಿ ವಂದೇ ಭಾರತ್ ಸೇರಿದಂತೆ ದೇಶದಲ್ಲಿ ಒಟ್ಟು ಮೂರು ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.
#WATCH | Bellary road in Bengaluru decked up ahead of Prime Minister Narendra Modi's visit to Karnataka today. pic.twitter.com/pyWH5Pj3jA
— ANI (@ANI) August 10, 2025
#WATCH | Bengaluru, Karnataka: Prime Minister Narendra Modi to flag off 3 Vande Bharat Express trains at KSR Railway Station in Bengaluru today. PM Modi will also flag off the Yellow line of the Bangalore metro.
The Prime Minister will inaugurate and lay the foundation stone of… pic.twitter.com/nxfbxQNCEv
— ANI (@ANI) August 10, 2025
#WATCH | Bengaluru, Karnataka: Prime Minister Narendra Modi to visit Bengaluru today
PM Modi will flag off 3 Vande Bharat Express trains at KSR Railway Station in Bengaluru. Thereafter, he will flag off the Yellow line of the Bangalore metro and undertake a metro ride from RV… pic.twitter.com/0libze2Yff
— ANI (@ANI) August 10, 2025