ನವದೆಹಲಿ : ನಿನ್ನೆ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು. ಇದೀಗ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಧನ್ಕರ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.
ಹೌದು ನಿನ್ನೆ ಅನಾರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.
ಸಂವಿಧಾನದ 67(A) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ʻಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.