ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನ ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ದ್ರೌಪದಿ ಮುರ್ಮು ಆಗಮಿಸಿದ್ದಾರೆ.
ಬೆಂಗಳೂರಿನ ಹೆಚ್.ಎ.ಎಲ್ ಗೆ ಆಗಮಿಸಿದ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ನವರು ಹೂಗುಚ್ಛ, ಶಾಲು ಹೊದಿಸುವ ಮೂಲಕ ಸ್ವಾಗತಿಸಿದ್ದಾರೆ. ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಸೇರಿದಂತೆ ಅನೇಕರು ಭಾಗಿಯಾಗಿದ್ದರು.ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ರಾಷ್ಟ್ರಪತಿ ದ್ರೌಪದಿ ಅವರು ಬಳಿಕ 3 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಂದ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ 5-30ಕ್ಕೆ ಬೆಳಗಾವಿ ಏರ್‌ಪೋರ್ಟ್‌ನಿಂದ ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಹಾರೈಸಿದೆ. pic.twitter.com/179eVEy78L
— Siddaramaiah (@siddaramaiah) January 3, 2025