ಮೈಸೂರು : ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆ 10 ನಿಮಿಷಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಲ್ಲಿದ್ದಾರೆ.ಮಧ್ಯಾಹ್ನ 3:45 ಕ್ಕೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7 ಗಂಟೆಗೆ ಯಾರ್ಡಿಸನ್ ಬ್ಲೂ ಹೋಟೆಲ್ ಗೆ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ.
ಬಳಿಕ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದು ಇಂದು ರಾತ್ರಿ ಯಾರ್ಡಿಸನ್ ಬ್ಲೂ ಹೋಟೆಲಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 8:50ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಲಿದ್ದು ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಉಪಹಾರ ಸೇವಿಸಲಿದ್ದಾರೆ.ನಂತರ ಅರಮನೆ ವೀಕ್ಷಣೆ ಮಾಡಲಿದ್ದಾರೆ ಅರಮನೆ ವೀಕ್ಷಣೆ ನಂತರ ಮೈಸೂರು ವಿಮಾನ ನಿಲ್ದಾಣದ ಕಡೆಗೆ ಪ್ರಯಾಣ ಬೆಳೆಸಲಿದ್ದು ಬೆಳಿಗ್ಗೆ 10:30 ಕ್ಕೆ ಚೆನ್ನೈಗೆ ತೆರಳಲಿದ್ದಾರೆ.