ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದೀಗ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.
ಪ್ರಧಾನಿ ಮೋದಿ ಆರ್ವಿ ರಸ್ತೆ (ರಾಗಿಗುಡ್ಡ) ದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣವನ್ನು ಕೈಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ ಬೆಂಗಳೂರಿನ ಬಳ್ಳಾರಿ ರಸ್ತೆ ಸಜ್ಜುಗೊಂಡಿದೆ.ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಇದೀಗ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು, ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ 11:15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು -ಬೆಳಗಾವಿ ವಂದೇ ಭಾರತ್ ಸೇರಿದಂತೆ ದೇಶದಲ್ಲಿ ಒಟ್ಟು ಮೂರು ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.