ಬೆಂಗಳೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಕಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಈ ಒಂದು ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಲ್ಲಾ ವಿಪಕ್ಷ ಸಂಸದರು ಸೇರಿ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು.
ಸೋಮವಾರದಂದು ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸುತ್ತೇವೆ. ಚುನಾವಣಾ ಅಕ್ರಮ ಖಂಡಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿರುವ ಬಗ್ಗೆ ದೂರು ನೀಡುತ್ತೇವೆ. 2024ರ ಚುನಾವಣೆಯಲ್ಲಿ ಮೋದಿ ಅಂಡ್ ಕಂಪನಿ , ನಿಜವಾಗಿ ಗೆದ್ದಿಲ್ಲ ಕಳ್ಳತನದಿಂದ ಗೆದ್ದ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಜನರಿಂದ ಛೀಮಾರಿ ಹಾಕಿಸುತ್ತೇವೆ. ಮೋದಿ ಇಡಿ ಸಿಬಿಐ ಬಳಸಿ ಮೆಜಾರಿಟಿ ಮಾಡಿಕೊಂಡಿದ್ದಾರೆ ಅನೇಕ ರಾಜ್ಯಗಳಲ್ಲಿ ಬಿಜೆಪಿಗೆ ಮೆಜಾರಿಟಿ ಇರಲಿಲ್ಲ ಆದರೂ ಶಾಸಕರನ್ನು ಖರೀದಿಸಿ ಸರ್ಕಾರಗಳನ್ನು ರಚನೆ ಮಾಡಿದರು ಅದೇ ಚಾಳಿ ಬಿಜೆಪಿಯವರು ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.