ಚಿತ್ರದುರ್ಗ : ಟೈರ್ ಸ್ಪೋಟಗೊಂಡ ಪರಿಣಾಮ ಏಕಾಏಕಿ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಬಳಿ ನಡೆದಿದೆ.
ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಖಾಸಗಿ ಬಸ್ ಏಕಾಏಕಿ ಹೊತ್ತಿ ಉರಿದಿದೆ. ಟೈರ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.