ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್ ವೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಮಂಡ್ಯ ಹೊರವಲಯದ ಸ್ಯಾಂಜೋ ಆಸ್ಪತ್ರೆ ಬಳಿಕ ಖಾಸಗಿ ಬಸ್ ವೊಂದು ಟೈರ್ ಬ್ಲಾಸ್ಟ್ ಆಗಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಕಣ್ಣೂರಿನತ್ತ ಹೊರಟಿದ್ದ ಖಾಸಗಿ ಬಸ್ ನ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಸ್ ಡ್ರೈವರ್ ಪ್ರಯಾಣಿಕರನ್ನು ಇಳಿಸಿದ್ದು, ಕ್ಷಣಾರ್ಧದಲ್ಲೇ ಬಸ್ ಧಗಧಗನೇ ಹೊತ್ತಿ ಉರಿದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.