ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಶೃಂಗೇರಿ ತಾಲೂಕಿನ ಕಾವಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೃಂಗೇರಿ ಪ್ರವಾಸಕ್ಕೆ ವಿದ್ಯಾರ್ಥಿಗಳ ತಂಡ ಬಂದಿತ್ತು. ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಾಗ ಈ ಅಪಘಾತ ಸಂಭವಿಸಿದೆ.ಬಸ್ ನಲ್ಲಿ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.








