ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದ್ದು ಪ್ರವಾಸಕ್ಕೆ ಎಂದು ತೆರಳಿದ್ದ 45 ಪ್ರಯಾಣಿಕರಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಎಂಬ ಗ್ರಾಮದಲ್ಲಿ ನಡೆದಿದೆ.
ಪ್ರವಾಸಕ್ಕೆ ಎಂದು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ಬೆಂಗಳೂರು ಮೂಲದ ಬಸ್ ಪಲ್ಟಿಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆಂದು ಪ್ರವಾಸಿಗರು ಬಂದಿದ್ದರು.
ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿ ಯಾದ ಬಳಿಕ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆ ಕುರಿತಂತೆ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.