ರಾಮನಗರ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಅಪಘಾತದಲ್ಲಿ ಬಸ್ ನಲ್ಲಿದ್ದ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ದಯಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅತಿಯಾದ ವೇಗವೇ ನಿಯಂತ್ರಣ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.