ನವದೆಹಲಿ : ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್‌ನ ನಿಜವಾದ ಮುಖವಾಡ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ದೂರಿದ್ದರು.
ಹೌದು ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುವುದರ ಕುರಿತು ಹೇಳಿಕೆ ನೀಡಿದ ವಿಚಾರವಾಗಿ, ಇಂದು ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿತ್ತು. ಮುಸ್ಲಿಮರಿಗೆ ಶೇಖಡ ನಾಲ್ಕರಷ್ಟು ಮೀಸಲಾತಿ ಸಂಬಂಧ ಸಂವಿಧಾನ ಬದಲಾವಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜುಗೆ ಹಕ್ಕುಚ್ಯುತಿ ಮಂಡನೆ ನೋಟಿಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಹಕ್ಕುಚ್ಯುತಿ ನೋಟಿಸ್ ಜಾರಿ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ ಡಿಕೆ ಶಿವಕುಮಾರ್ ಹೇಳಿಕೆಯನ್ನು ಕಿರಣ್ ರಿದಿಜು ತಿರುಚಿದ್ದಾರೆ. ರಿಜಿಜು ವಿರುದ್ಧ ಹಕ್ಕುಚ್ಯುತಿ ಆರೋಪ ಮಾಡಿದ ಜೈರಾಮ್ ರಮೇಶ್, ಇದೀಗ ಕಿರಣ ರಿಜಿಜು ವಿರುದ್ಧ ಹಕ್ಕು ಚ್ಯುತಿ ಮಂಡನೆಗೆ ನೋಟಿಸ್ ಜಾರಿ ಮಾಡಲಾಗಿದೆ. ರಿಜಿಜು ವಿರುದ್ಧ ಹಕ್ಕುಚ್ಯುತಿ ಕಾರ್ಯವಿಧಾನ ಆರಂಭಿಸುವಂತೆ ನೋಟಿಸ್ ನೀಡಲಾಗಿದೆ.