ಬೆಂಗಳೂರು : ಈಗಾಗಲೇ ಬೀದರ್ ನ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಕೇಸ್ ನಲ್ಲಿ ಗಂಭೀರವಾದ ಆರೋಪ ಎದುರಿಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬರುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶರತ್ ಬಚ್ಚೇಗೌಡ ವಿರುದ್ಧ ಆರೋಪ ಕೇಳಿ ಬಂದಿದೆ. ಈ ಕುರಿತು ದಯಾಮರಣ ಕೋರಿ ವೆಂಡರ್ಸ್ ಗಳು ಇದೀಗ ಪತ್ರ ಬರೆದಿದ್ದಾರೆ.
ಹೌದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ಈ ಕುರಿತು ಪತ್ರ ಬರೆದಿದ್ದು ವೆಂಡರ್ಸ್ ಗಳು ಆತ್ಮಹತ್ಯೆ ಮಾಡಿಕೊಂಡರೆ ನಾಲ್ವರು ಹೊಣೆ. ಪ್ರಿಯಾಂಕ್ ಖರ್ಗೆ ಸೇರಿ ನಾಲ್ವರು ಹೊಣೆ ಎಂದು ಪತ್ರ ಬರೆದಿದ್ದಾರೆ. ವೆಂಡರ್ಸ್ ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್ ಗಳಿಗೆ ಬಿಲ್ ಪಾವತಿ ಬಾಕಿ ಇದೆ. ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಕಷ್ಟವನ್ನು ಆಲಿಸುತ್ತಿಲ್ಲ.
ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕಿಯೋನಿಕ್ಸ್ ಅಧ್ಯಕ್ಷ ಶರತ್ ಸಿಇಒ ಪವನ್ ಕುಮಾರ್ ಕಿಯೋನಿಕ್ಸ್ ಹಣಕಾಸು ವಿಭಾಗದ ನಿಶ್ಚಿತ್ ಅವರೇ ಕಾರಣ ಇಲ್ಲದಿದ್ದರೆ ವೆಂಡರ್ಸ್ ಗಳಿಗೆ ದಯಾಮರಣ ನೀಡುವಂತೆ ಇದೀಗ ಪತ್ರ ಬರೆದಿದ್ದಾರೆ. ಹಾಗಾಗಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.