ವಯನಾಡ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ನವೆಂಬರ್ 13 ರಂದು ನಡೆಯಲಿರುವ ಉಪಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಸಿದರು. ವಯನಾಡ್ ಲೋಕಸಭಾ ಉಪಚುನಾವಣೆಯ ಫಲಿತಾಂಶ ನವೆಂಬರ್ 23 ರಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಜೊತೆಗೆ ಪ್ರಕಟವಾಗಲಿದೆ.
ನಾಮಪತ್ರ ಸಲ್ಲಿಕೆಗೆ ಸಹಿ ಹಾಕುವಾಗ ಪ್ರಿಯಾಂಕಾ ಗಾಂಧಿ ಅವರನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರು ಭೇಟಿಯಾದರು ವಯನಾಡ್ ನಿಂದ ನಾಮಪತ್ರ ಸಲ್ಲಿಸಿದ ನಂತರ ಪ್ರಿಯಾಂಕಾ ಗಾಂಧಿ ತಮ್ಮ ಸಹೋದರ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಲಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಹಿರಿಯ ನಾಯಕರು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಉಪಸ್ಥಿತರಿರಲಿದ್ದಾರೆ.
ರಾಹುಲ್ ಗಾಂಧಿ ರಾಯ್ ಬರೇಲಿ ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳಿಂದ ಗೆದ್ದ ನಂತರ ವಯನಾಡ್ ನಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು.