ಶಿವಮೊಗ್ಗ : ಒಂದು ಕಡೆ ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದು ಮದ್ದೂರು ಪಟ್ಟಣ ಬಂದ್ ಗೆ ಕರೆ ನೀಡಿವೆ. ಅಲ್ಲದೆ ಇಂದು ಬಿಜೆಪಿ ನಿಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ಕೊಡಲಿದೆ. ಇತ್ತ ಇನ್ನೊಂದು ಕಡೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ವರದಿಯಾಗಿದೆ.
ಹೌದು ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನೆನ್ನೆ ಈ ಒಂದು ಘಟನೆ ನಡೆದಿದೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ವಿರುದ್ಧ ಇದೀಗ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ ಕಿಡಿಗೇಡಿಗಳ ವಿರುದ್ಧ ಹಿಂದೂ ಸಂಘಟನೆಗಳು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಭದ್ರಾವತಿ ಠಾಣೆಯಲ್ಲಿ ಈ ಕುರಿತು ಒಂದು ಶೀಘ್ರದಲ್ಲೇ ಆರೋಪಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದರು.