ಬೆಳಗಾವಿ : ಬೆಳಗಾವಿಯಲ್ಲಿ ಕೋರ್ಟ್ ಆವರಣದಲ್ಲೇ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕ್ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.
ಬೆಳಗಾವಿಯ ಕೋರ್ಟ್ ಆವರಣದಲ್ಲೇ ಪಾತಕಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ. ಪಾಕ್ ಪರ ಘೋಷಣೆ ಕೂಗಿದವನನ್ನು ಜಯೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು, ಪಾಕ್ ಪರ ಘೋಷಣೆ ಕೂಗುತ್ತಿದ್ದ ವೇಳೆ ಸಾರ್ವಜನಿಕರು, ವಕೀಲರು ಧರ್ಮದೇಟ ನೀಡಿದ್ದಾರೆ. ಕೂಡಲೇ ಪೊಲೀಸರು ಜಯೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ ಜಯೇಶ್ ಕೇಂದ್ರ ಸಚಿವರಾಗಿದ್ದ ನಿತೀನ್ ಗಡ್ಕರಿಗೂ ಕೊಲೆ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ನಿತೀನ್ ಗಡ್ಕರಿಗೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.