ದಾವಣಗೆರೆ : ಇದೆ ಮೇ 31ರವರೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನುಗವಾಡಿ ಬಳಿ ಇರುವ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ಶಾಂತಿ ಕಾಪಾಡುವ ಹಿತ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31 ರವರೆಗೆ ಯಾವುದೇ ಸಭೆ ಸಮಾರಂಭ ಮತ್ತು ಸುದ್ದಿಗೋಷ್ಠಿ ನಡೆಸುವಂತಿಲ್ಲ.
ಟ್ರಸ್ಟಿಗಳು ಆಗಿರಬಹುದು, ಸ್ವಾಮೀಜಿ ಬೆಂಬಲಿಗರು ಸಭೆ ನಡೆಸಿ ಹೇಳಿಕೆ ನೀಡುತ್ತಿದ್ದಾರೆ. ಉದ್ರಿಕ್ತ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂದು ವರದಿ ಬಂದಿದ್ದು, ಹಾಗಾಗಿ ದಾವಣಗೆರೆ ಎಸ್ಪಿ ಶೇಖರ್ ನೀಡಿದ ವರದಿ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಠದಲ್ಲಿ ದೈನಂದಿನ ಪೂಜಾ ಕಾರ್ಯಕ್ಕೆ ಯಾವುದೇ ಅಡ್ಡಿ ಇಲ್ಲವೆಂದು ಡಿಸಿ ಸ್ಪಷ್ಟಪಡಿಸಿದ್ದಾರೆ.








