ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆದಿತ್ತು. ಇದೀಗ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯ ತಿಳಿದುಬರಲಿದೆ.
ಚನ್ನಪಟ್ಟಣದಲ್ಲಿ ಬೆಳಿಗ್ಗೆ 8 ಗಂಟೆಗೆ ಇವಿಎಂ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಬೆಂಗಳೂರು ಮೈಸೂರು ಹೆದ್ದಾರಿ ಬಳಿ ಇರುವ ಈ ಒಂದು ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ 88.81ರಷ್ಟು ಮತದಾನವಾಗಿತ್ತು. ಕಾಲೇಜಿನ ಮೂರು ಹಾಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟು 20 ಸುತ್ತು ನಡೆಯಲಿರುವ ಮತ ಎಣಿಕೆ ಕಾರ್ಯ. 14 ಟೇಬಲ್ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇನ್ನು ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕೂಡ ಆರಂಭವಾಗಲಿದ್ದು, ಹಾವೇರಿ ತಾಲೂಕಿನ ದೇವಕಿರಿ ಬಳಿ ಇರುವ ಕಾಲೇಜಿನಲ್ಲಿ ಬೆಳಿಗ್ಗೆ 7:30ಕ್ಕೆ ಸ್ಟ್ರಾಂಗ್ ರೂಮ್ ಓಪನ್ ಆಗಲಿದೆ. 8 ಗಂಟೆಗೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ಇವಿ ಮತಗಳ ಎಣಿಕೆಗಾಗಿ 14 ಟೇಬಲ್ ಗಳನ್ನು ನಿಗದಿ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬರು ಮೇಲ್ವಿಚಾರಕರು ಹಾಗೂ ಒಬ್ಬರು ಎಣಿಕೆ ಸಹಾಯಕರನ್ನು ನೇಮಕ ಮಾಡಲಾಗಿದೆ.
ಒಬ್ಬರು ಎಣಿಕೆ ಮೈಕ್ರೋ ಅಬ್ಸರ್ವರ್ ರನ್ನು ನೇಮಿಸಲಾಗಿದೆ. ಮತ ಎಣಿಕೆಯ ಕೇಂದ್ರ ಸ್ವತಃ ಬಿಗಿ ಬಂದೋಬಸ್ತ್ ಮಾಡಲಾಗಿದೆ ನಾಲ್ವರು DYSP ಹಾಗು 9 CPI, 25 PSI, 29 ASI, 750 ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್, KSRPಯ ಎರಡು ತುಕಡಿಗಳ ನಿಯೋಜನೆ ಮಾಡಲಾಗಿದೆ. ಭದ್ರತೆಗೆ ನಾಲ್ಕು DAR ತಕಡಿ ನಿಯೋಜನೆ ಮಾಡಲಾಗಿದೆ. ಮತ ಎಣಿಕೆಯ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅದೇ ರೀತಿಯಾಗಿ ಸಂಡೂರು ಕ್ಷೇತ್ರದ ಉಪಚುನಾವಣೆ ಮತಎಣಿಕೆ ಕೂಡ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಹಾಗಾಗಿ ಮೊದಲೇ ಕೇಂದ್ರದ ಸುತ್ತಮುತ್ತಲು ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಂಡೂರು ಕ್ಷೇತ್ರದ ಮತ ಎಣಿಕೆಗೆ 15 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು ಹಾಗೂ ಇಬ್ಬರು ಮೈಕ್ರೋ ಅಬ್ಸೋವರ್ ರನ್ನು ನೇಮಿಸಲಾಗಿದೆ.