ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ಸಂಬಂಧ ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿನ್ನೆ ತುಮಕೂರಿನ ಗುಬ್ಬಿ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಸ್ವಾಮೀಜಿಗಳು ಸೇರಿದಂತೆ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರತಿಭಟನೆಗೆ ಜನಪ್ರತಿನಿಧಿಗಳು, ಮಠಾಧೀಶರು ಬೆಂಬಲ ನೀಡಿದ್ದರು. ಇದೀಗ ಹೋರಾಟದಲ್ಲಿ ಭಾಗಿಯಾಗಿದ್ದ 11ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿ ತೊಂದರೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಲಾಗಿದ್ದು, ಈ ವೇಳೆ ಸಿಪಿಐ, ಪಿಎಸ್ ಐ, ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.