ಮಂಡ್ಯ : ಸಾಕಷ್ಟು ವಿರೋಧದ ನಡುವೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ವಿವಾದಿತ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ ಸ್ಫೋಟ ಕೂಡ ನಡೆಯಲಿದೆ. ಇದಕ್ಕೆ ರೈತರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇದರ ಮಧ್ಯ ಕೆ.ಆರ್.ಎಸ್ ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದ ಸಂಜಯ್ ವತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ.ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ವಿರುದ್ದ ಆಕ್ರೋಶ ಹೊರಹಕಿದ್ದಾರೆ.
ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಧಿಕ್ಕಾರ ಕೂಗಿ ಅಸಮಧಾನಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ವಿಜ್ಞಾನಿಗಳಿಗೆ ಗೋ ಬ್ಯಾಕ್ ಕೂಗಿ ಆಕ್ರೋಶ ಹೊರಹಕಿದ್ದಾರೆ.