ಮಂಗಳೂರು : ದಕ್ಷಿಣಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾದ ಬಳಿಕ ಅರುಣ ಪುತ್ತಿಲ್ ಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಇದೀಗ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್ ಅಮಿನ್ ಬಂಧನವಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೇಕಾರು ಪೊಲೀಸರು ರತ್ನಾಕರ್ ಅಮೀನ್ ನನ್ನು ಅರೆಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಇದೀಗ ರತ್ನಾಕರ್ ಅಮಿನನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ. ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಮುಖಂಡ ರತ್ನಾಕರನ ಬಂಧನವಾಗಿದೆ.