ಮಂಗಳೂರು : ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಚಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಮೇ.12 ರಂದು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.