ಬೆಂಗಳೂರು : ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣದ ವಿಚಾರ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಹೌದು ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿಗೆ ಈ ಒಂದು ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಅವರು ಪ್ರತಿಭಟನೆ ಮಾಡಿದ್ದರು. ಜುಲೈ 8ರಂದು ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.