ವಿಜಯಪುರ : ಹುಬ್ಬಳ್ಳಿಯಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರಕರಣ ದಾಖಲಾಗಿದೆ.
ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದನೆ, ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ನಿವಾಸಿ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.