ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಿನ್ನೆ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.