ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲು ರಸ್ತೆಯಲ್ಲಿ ಪತ್ತೆಯಾದ ಗೋವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ನಾಯಕ ಶರಣ್ ಪಂಪ್‌ವೆಲ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಹೌದು ಶರಣ್ ಪಂಪ್‌ವೆಲ್ ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕುಂಜಾಲಿನ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ಮೂಲಭೂತವಾದಿಗಳ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದರ ವಿಡಿ ಯೋ ವಾಟ್ಸಪ್‌ನಲ್ಲಿ ಹರಿದಾಡಿತ್ತು. ಇದು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಪ್ರಚೋದನಕಾರಿ ಹೇಳಿಕೆ, ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತಿದೆ.
ಈ ಪ್ರಕರಣದ ಪೊಲೀಸ್ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಅದಕ್ಕೆ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ, ಗೊಂದಲ ಉಂಟು ಮಾಡುವ ಸಾಧ್ಯತೆ ಇದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.