ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರಿಗೂ ಹೃದಯಾಘಾತ ಎನ್ನುವ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಬೆಳಗಾವಿಯಲ್ಲಿ ಗಣೇಶೋತ್ಸವ ಬಂದೋಬಸ್ತ್ ಮುಗಿಸಿ ಮನೆಗೆ ಬಂದ ಪಿಎಸ್ಐ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದಿದೆ.
ಹೌದು ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿಎಸ್ಐ ಹೃದಯಘಾತದಿಂದ ಸಾವನ್ನಾಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಪಿಎಸ್ಐ ಸುರೇಶ್ ಖೋತ್ ಎನ್ನುವವರು ಠಾಣೆಯ ಹೆಚ್ಚುವರಿ ಪಿಎಸ್ಐ ಆಗಿದ್ದರು. ರಾಯಭಾಗದಲ್ಲಿ ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದರು.
ಈ ವೇಳೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಸುರೇಶರನ್ನು ಕೂಡಲೇ ಮಿರಾಜ್‍ನ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪಿಎಸ್ಐ ಸುರೇಶ್ ಖೋತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ.