ಬೆಂಗಳೂರು : ಸೆಪ್ಟೆಂಬರ್ 22 ಕ್ಕೆ ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೆ. 22 ಕ್ಕೆ ನಿಗದಿಯಾಗಿದ್ದ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಸೆ.28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.