ನವದೆಹಲಿ : ರಾಜ್ಯದಲ್ಲಿ 545 ಪಿಎಸ್ಐ ೇಮಕಾತಿ ಪರೀಕ್ಷೆಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಆರ್‌ಡಿ ಪಾಟೀಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಸುಪ್ರೀಂಕೋರ್ಟ್ ಆರೋಪಿಗೆ ಜಾಮೀನು ನೀಡಲು ಇದೀಗ ನಿರಾಕರಿಸಿದೆ.
ಇಂದು ಸಿಜೆಐ ಬಿ ಆರ್ ಗವಾಯಿ ನೇತೃತ್ವದ ತ್ರೀ ಸದಸ್ಯ ಪೀಠದಲ್ಲಿ ಪ್ರಕರಣದ ಕುರಿತು ಇಂದು ವಿಚಾರಣೆ ನಡೆಯಿತು. ವೈದ್ಯಕೀಯ ಕಾರಣಗಳನ್ನು ನೀಡಿ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಈಗಾಗಲೇ ನಾನು ಎರಡು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿ ಇದ್ದೇನೆ. ಸಾಕ್ಷಿಗಳ ವಿಚಾರಣೆ ವಿಳಂಬವಾಗಲಿದೆ. ನನ್ನ ಪಾಸ್ಪೋರ್ಟ್ ನ್ಯಾಯಾಲಯಕ್ಕೆ ಒಪ್ಪಿಸಿದ್ದೇನೆ. ಹೀಗಾಗಿ ನಾನು ತಲೆಮರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನರಗಳ ಸಮಸ್ಯೆಯಿಂದ ಆರೋಗ್ಯ ಸಮಸ್ಯೆಯಾಗಿದೆ. ಚಿಕಿತ್ಸೆಗಾಗಿ ದಯವಿಟ್ಟು ಕನಿಷ್ಠ 8 ವಾರಗಳ ಕಾಲ ಜಾಮೀನು ನೀಡಬೇಕು. ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಸುಪ್ರೀಂ ಕೋರ್ಟ್ ಆರ್ ಡಿ ಪಾಟೀಲ್ ಗೆ ಬಿಗ್ ಶಾಕ್ ನೀಡಿದ್ದು ಜಾಮೀನು ನೀಡಲು ನಿರಾಕರಿಸಿದೆ.