ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ . ಪುನೀತ್ ಕೆರೆಹಳ್ಳಿ ಮಲಗಿದ್ದ ವೇಳೆ ಇಂದು ಮುಂಜಾನೆ 4.45 ರ ಸುಮಾರಿಗೆ ಅಸ್ವಸ್ಥರಾಗಿದ್ದು, ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿಲಾಗಿದೆ