ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ -ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಸುರೇಶ ಕುಮಾರ್, ಅರಗಜ್ಞಾನೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಗರಣ, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ದುರಾಡಳಿತವನ್ನು ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕರೆಕೊಟ್ಟಿತ್ತು. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಮೈಸೂರು ಮುಡಾ ಹಗರಣ, ವಸತಿ ಇಲಾಖೆಯ ಭ್ರಷ್ಟಾಚಾರ, ಟ್ರ್ಯಾಕ್ಟರ್ ಹಂಚಿಕೆಯಲ್ಲಿ ಹಗರಣ, ಕಿಯೋನಿಕ್ಸ್ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
#WATCH | Karnataka | State BJP chief BY Vijayendra and party workers detained by police during the party's protest demanding CBI inquiry and CM Siddaramaiah's resignation over MUDA (Mysuru Urban Development Authority) alleged irregularities case pic.twitter.com/SHg3hjCwN3
— ANI (@ANI) July 3, 2024