ನವದೆಹಲಿ : ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (EC) ಇಂದು (ಭಾನುವಾರ) ಮಧ್ಯಾಹ್ನ 3:00 ಗಂಟೆಗೆ ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.
ಆಗಸ್ಟ್ 7 ರಂದು ರಾಹುಲ್ ಚುನಾವಣಾ ಆಯೋಗವನ್ನು ಮತ ಕಳ್ಳತನದ ಆರೋಪ ಮಾಡಿದ್ದರು. ಅವರು, ‘ಮತಗಳನ್ನು ಕದಿಯಲಾಗುತ್ತಿದೆ. ಚುನಾವಣಾ ಆಯೋಗವು ಕಳ್ಳತನದಲ್ಲಿ ಭಾಗಿಯಾಗಿದೆ ಎಂಬುದಕ್ಕೆ ನಮ್ಮ ಬಳಿ ಪುರಾವೆಗಳಿವೆ. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ’ ಎಂದು ಹೇಳಿದ್ದರು.
‘ಮತ ಕಳ್ಳತನ’ ಕುರಿತು ರಾಹುಲ್ ವೀಡಿಯೊ ಬಿಡುಗಡೆ ಮಾಡಿದ್ದಾರೆ ರಾಹುಲ್ ಗಾಂಧಿ ‘ಮಿಸ್ಸಿಂಗ್ ವೋಟ್’ ಎಂಬ ಶೀರ್ಷಿಕೆಯ ಒಂದು ನಿಮಿಷದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪ, ಎಸ್ಐಆರ್ ವಿರೋಧಿಸಿ ಪ್ರತಿ ಪಕ್ಷಗಳ ನಾಯಕರು ಹೋರಾಟ ತೀವ್ರಗೊಳಿಸಿರುವ ಮಧ್ಯೆ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.