ಬೆಂಗಳೂರು: ಕರ್ನಾಟಕ ಬಿಜೆಪಿ ಸಲ್ಲಿಕೆ ಮಾಡಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಹುಲ್ ಗಾಂಧಿಯವರನ್ನು ಸಿಎಂ ಡಿ.ಸಿಎಂ ಅವರು ಸ್ವಾಗತಿಸಿದರು. ಇನ್ನೂ ಇದೇ ವೇಳೇ ಅವರು ಕೋರ್ಟ್ ನತ್ತ ತೆರಳುತ್ತಿದ್ದಾರೆ. ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು ಈ ಹಿನ್ನಲೆಯಲ್ಲಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರು ನ್ಯಾಯಾಲಯದಿಂದ ಇಂದು ಜಾಮೀನು ಕೋರಲಿದ್ದಾರೆ ಎನ್ನಲಾಗಿದೆ.