ನವದೆಹಲಿ : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮತಿ ನೀಡಿದ್ದಾರೆ.
ಹಾಸನದಲ್ಲಿ ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಂದಲೇ ಅಪಸ್ವರ ವ್ಯಕ್ತವಾಗಿತ್ತು. ಅಲ್ಲದೇ ಸ್ವಾಭಿಮಾನಿ ಸಮಾವೇಶದ ಬಗ್ಗೆ ಎಐಸಿಸಿಗೂ ದೂರು ನೀಡಲಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ, ಸ್ವಾಭಿಮಾನಿ ಸಮಾವೇಶ್ವದ ಮಹತ್ವ ವಿವರಿಸಿದ್ದಾರೆ.
ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದರು. ಆದರೆ ಇದೀಗ ಸ್ವಾಭಿಮಾನ ಸಮಾವೇಶಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.