ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ವಾಗತಿಸಿದರು.
ದೆಹಲಿಯಿಂದ ಬೆಂಗಳೂರು HAL ಏರ್ ಪೋರ್ಟ್ ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
Karnataka | Congress President Mallikarjun Kharge and Leader of Opposition Rahul Gandhi reach Bengaluru. They were welcomed by Deputy CM DK Shivakumar and Karnataka Congress in-charge Randeep Surjewala.
Source: AICC pic.twitter.com/R8GDGoPVYW
— ANI (@ANI) August 8, 2025