ರಾಯಚೂರು : ರಾಯಚೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ಎಂದು ನಡೆದಿದ್ದು ದುಷ್ಕರ್ಮಿಗಳು ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಉದ್ಯಾನವನ ಬಳಿ ನಡೆದಿದೆ.
ಕೊಲೆಯಾದ ಯುವಕನನ್ನು ಇಂದಿರಾನಗರದ ನಿವಾಸಿ ವೀರೇಶ್ (26) ಎಂದು ಗುರುತಿಸಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಕೃತ್ಯದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.