ಮಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು NIA ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಹೌದು ಸುಹಾಸ್ ಶೆಟ್ಟಿ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 14 ಕಡೆ ಎನ್ಐಎ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮಂಗಳೂರಿನ 14 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಹಲವರ ಮನೆ ಮತ್ತು ಕಚೇರಿಯ ಮೇಲೆ ಎನ್ಐಎ ತಂಡ ದಾಳಿ ಮಾಡಿದೆ ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.