ಬೆಂಗಳೂರು : ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಗುಂಪೊಂದು ಕೊಲೆ ಮಾಡಲಾಗಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದರೂ ಅದು ತಪ್ಪು – ಅದು ದೇಶದ್ರೋಹದ ಕೃತ್ಯ, ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹಲ್ಲೆ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಈ ಪ್ರಕರಣದಲ್ಲಿ 15 ಜನರನ್ನು ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.
ಏಪ್ರಿಲ್ 27 ರಂದು ಕುಡುಪು ಪ್ರದೇಶದ ಕಲ್ಲುರ್ಟಿ ದೇವಸ್ಥಾನದ ಬಳಿ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ “ಪಾಕಿಸ್ತಾನ ಜಿಂದಾಬಾದ್” ಎಂದು ಕೂಗಿದ ಬಳಿಕ ಆ ವ್ಯಕ್ತಿಯನ್ನು ಒಂದು ಗುಂಪು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.
Bengaluru | On the mob lynching incident in Kudupu, Mangaluru, Karnataka CM Siddaramaiah says, "Whoever raises pro-Pakistan slogans, it is wrong – it is an act of treason. An investigation is underway, and 15 people have been arrested in this case." pic.twitter.com/CjsZPgXsYg
— ANI (@ANI) April 30, 2025