ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಜೈಲಿಗೆ ಹೋಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಇನ್ಸ್ಟಾಗ್ರಾಮ್ ರಿಲ್ಸ್ ಡಿಲೀಟ್ ಮಾಡುವಂತೆ ಸೂಚಿಸಿದ್ದರು. ಪೊಲೀಸರ ಸೂಚನೆ ಮೇರೆಗೆ ರಜತ್ ರೀಲ್ಸ್ ಡಿಲೀಟ್ ಮಾಡಿದ್ದಾರೆ.
ಪ್ರಕರಣ ಹಿನ್ನೆಲೆ?
ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ಗೌಡ, ರಜತ್ ಕಿಶನ್ ಲಾಂಗ್ ಹಿಡಿದು ರೀಲ್ಸ್ ಮಾಡಿ ಪೋಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ವಿನಯ್ಗೌಡ, ರಜತ್ ಕಿಶನ್ ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್, ಕೈಯಲ್ಲಿ ಲಾಂಗು ಹಿಡಿದು ನಟ ದರ್ಶನ್ ಅವರ ಅಭಿನಯದ ಮೆಜೆಸ್ಟಿಕ್ ಹಾಡಿಗೆ ಸ್ಲೋ ಮೋಷನ್ ವಾಕ್ ಮಾಡಿದ್ದರು. ಸಾರ್ವಜನಿಕ ಸ್ಥಳವಾಗಿರುವ ರಸ್ತೆಯಲ್ಲಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದರು. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.