ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೌದು ಕೋರ್ಟ್ ಗೆ ಹಾಜರಾಗಬೇಕು ಎಂದು ರಜತ ಹಾಗೂ ವಿನಯ್ ಗೌಡಗೆ ಕೋರ್ಟ್ ಷರತ್ತು ನೀಡಿ ಇದೇ ಪ್ರಕರಣದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗದೆ ರಜತ್ ನಿರ್ಲಕ್ಷ ತೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ರಜತ್ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು 14 ದಿನಗಳ ಕಾಲ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದ್ದು, ಬಳಿಕ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಜತ್ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ ನಿಗದಿಪಡಿಸಿದೆ.