ಬೆಂಗಳೂರು : ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ವಿನಯ್ ಗೌಡ ರಿಲೀಸ್ ಆಗಿದ್ದು, ನಿನ್ನೆ ನ್ಯಾಯಾಲಯ ಇಬ್ಬರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ನಿನ್ನೆ ಜಾಮೀನು ಪ್ರತಿ ತಡವಾಗಿ ಜೈಲು ಅಧಿಕಾರಿಗಳ ಕೈ ಸೇರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ಮತ್ತು ವಿನಯ ಗೌಡ ಬಿಡುಗಡೆ ಆಗಿದ್ದಾರೆ.