ಬೆಂಗಳೂರು : ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಸಾಂಗನ್ನು ಅನಧಿಕೃತವಾಗಿ ಬಳಸಿದ್ದರಿಂದ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲಿಸಲಾಗಿತ್ತು. ಈ ಕುರಿತಂತೆ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜುಲೈ 24ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಹೌದು ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಎಫ್ ಆರ್ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ರಕ್ಷಿತ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಗೆ ಕಾಪಿರೈಟ್ಸ್ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ.
ರಕ್ಷಿತ್ ಶೆಟ್ಟಿ ನಿರ್ದೇಶನದ ಪರಮಾವ ಸ್ಟುಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ನ್ಯಾಯ ಎಲ್ಲಿದೆ ಎಂಬ ಹಾಡನ್ನು ಬಳಸಿದ್ದರಿಂದ, ಎಂ ಆರ್ ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ಯಶವಂತಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.ಈ ವೇಳೆ ಪಬ್ಲಿಕ್ ಪ್ರೊಸೀಕ್ಯೂಟರ್ ರಕ್ಷಿತ್ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.ವಾದ ಪ್ರತಿವಾದ ನಂತರ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.