ಉತ್ತರಪ್ರದೇಶ : ಕಳೆದ ಕೆಲವು ದಿನಗಳ. ಹಿಂದೆ ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರವನ್ನು ಸ್ಫೋಟ ಮಾಡುವ ಕುರಿತು ಪ್ಲಾನ್ ರೂಪಿಸಿದ್ದ ಕೈದಿಯನ್ನು ಜೈಲಿನಲ್ಲಿಯೇ ಸಹಕೈದಿ ಒಬ್ಬ ಕೊಲೆ ಮಾಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಹೌದು ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ.
ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನ್ನು ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ರೆಹಮಾನ್ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಈಗ ಈ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.








