ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಘೋಷಿಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ತಮಗೆ ನಿರೀಕ್ಷಿತ “ಬೆಂಗಳೂರು ನಗರಾಭಿವೃದ್ಧಿ” ಖಾತೆ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಅವರು, ತಮ್ಮ ಸಚಿವ ಸ್ಥಾನಕ್ಕೆ ಕಡಾಖಂಡಿತವಾಗಿ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಮಲಿಂಗಾರೆಡ್ಡಿ ಅಧಿಕೃತ ಘೋಷಣೆ, ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದರು.
“ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಅದು ಸಿಗದ ಕಾರಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ಅವರು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ








