ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಇಬ್ಬರು ಬಂಧಿಸಿದ್ದು, ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಬಂಧಿತ ಉಗ್ರರನ್ನು ಇಂದು ಎನ್ ಐಎ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಉಗ್ರರಾದ ಮುಸಾವಿರ್, ಅಬ್ದುಲ್ ಮತೀನ್ ರನ್ನು ಕೋರಮಂಗಲದಲ್ಲಿರುವ ರಾಷ್ಟ್ರೀಯ ಕ್ರೀಡಾ ಗಾಮದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ.
ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಮತ್ತು ಅಬ್ದುಲ್ ಮತೀನ್ ತಾಹಾ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆ ತಿಳಿಸಿದೆ.
ಈ ನಡುವೆ ಬಂಧೀತ ಉಗ್ರರನ್ನು ಶನಿವಾರ 1:30 ಸಮಯದಲ್ಲಿ ಎನ್ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ಅವರನ್ನು ಕೊರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಾಗಿದ್ದು, , ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ.