ಬೆಂಗಳೂರು : ರಾಜ್ಯದಲ್ಲಿ ವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ.
ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ 8 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಮತ್ತೊಂದು ಘಟನೆಯಲ್ಲಿ ಕ್ಯಾಂಟರ್ ಗೆ ಗೂಡ್ಸ್ ಡಿಕ್ಕಿಯಾಗಿ ಮೂರು ಸಾವನಪ್ಪಿದ್ದಾರೆ. ಬೆಂಗಳೂರಿನ ಮೆಡಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮದ್ರಾಸ್ ರಸ್ತೆಯ ಮೇಳಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಲಾರಿಗೆ ಹಿಂದಿನಿಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಸಾವನಪ್ಪಿದ್ದು, ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








