ಬೆಂಗಳೂರು : ಸಹಕಲಾವಿದೆಯ ಮೇಲೆ ಅತ್ಯಾಚಾರ ನಡೆಸಿದ್ದು, ಅಲ್ಲದೆ ಎರಡು ಬಾರಿ ಗರ್ಭಪಾತ ಮಾಡಿಸಿದ ಆರೋಪದ ಮೇರೆಗೆ ಇದೀಗ ಕಾಮಿಡಿ ಕಿಲಾಡಿ ಖ್ಯಾತಿಯ ಕಿರುತೆರೆ ನಟ ಮಡೆನೂರು ಮನುವನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ.
ಹೌದು ತನ್ನ ಸಹಕಲಾವಿದೆಯ ಮೇಲೆ ಮಡೆನೂರು ಮನು ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಅತ್ಯಾಚಾರ ಸಂತ್ರಸ್ತೇ ಆರೋಪಿಸಿದ್ದರು. ಹಾಗಾಗಿ ನಿನ್ನೆ ಹಾಸನ ಜಿಲ್ಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೋಲಿಸರು ಮಡೇನೂರು ಮನು ಅರೆಸ್ಟ್ ಮಾಡಿ ಕರೆತಂದಿದ್ದರು. ಇದೀಗ ಇಂದು ಜಡ್ಜ್ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯ ಬಳಿಕ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಇದೀಗ ಮನುವನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಅತ್ಯಾಚಾರ ಆರೋಪದ ಅಡಿ ಮಡೇನೂರು ಮನುವನ್ನು ಬಂಧಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.